ಹಿಜಾಬ್ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜು ಸ್ಥಾಪನೆಗೆ ಮುಂದಾದ ರಾಜ್ಯ ವಕ್ಫ್ ಬೋರ್ಡ್ ; ಸರಕಾರದ ಅನುಮೋದನೆ ಪ್ರಸ್ತಾಪ – ಕಹಳೆ ನ್ಯೂಸ್
ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ,ಉಡುಪಿ ಕಲಬುರಗಿ,ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ಕಾಲೇಜಿಗೆ 2.5 ಕೋಟಿ...