ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...