ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ ‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ -ಕಹಳೆ ನ್ಯೂಸ್
ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾಗಿ...