ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್
ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...