ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ;ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...