ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ -ಕಹಳೆ ನ್ಯೂಸ್
ಬೆಂಗಳೂರು : ಹವಾಮಾನ ಇಲಾಖೆ ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆ ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮಾರ್ಚ್ 11ರ ಗುರುವಾರ 8.30ಕ್ಕೆ ಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರ್ಗಿಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನ ಇದಾಗಿದೆ. ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ...