ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಬೆಂಗಳೂರು, ಆ 03 : ಸಿಎಂ ಬಿಎಸ್ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ. ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...