Sunday, November 24, 2024

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಆಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ನಗರದ ಸಿಟಿ ಸಿವಿಲ್ ಕೋರ್ಟಿನಲ್ಲಿ OS number 797/2024 ಧರ್ಮಸ್ಥಳ ನಿಶ್ಚಲ್ ಜೈನ್, ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ನಿರ್ಬಂಧ ಆಜ್ಞೆಯನ್ನು ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆಯವರ ಕುಟುಂಬಸ್ಥರ ವಿರುದ್ಧ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ ; ಕೇಂದ್ರದ ಮಧ್ಯಂತರ ಬಜೆಟ್ ಸ್ವಾಗತಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ – ಕಹಳೆ ನ್ಯೂಸ್

ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿAದ ಸ್ವಾಗತಿಸುತ್ತೇನೆ. ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು...
ಬೆಂಗಳೂರು

ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ‌ ಡಾ. ರವೀಂದ್ರನಾಥ ನೇಮಕ – ಕಹಳೆ ನ್ಯೂಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿ ಮುಗಿದಿದ್ದು, ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ಇಂದಿಗೆ (ಜ.31) ಮುಕ್ತಾಯವಾಗಿದೆ. ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದ್ದು, ಈ ಬಾರಿ ಹೊಸ ನಿರ್ದೇಶಕರನ್ನು ನೇಮಕ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಖರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ರಾಯಚೂರು  ಪೊಲೀಸರು  ಎಫ್‌ಐಆರ್ ದಾಖಲಿಸಿದ್ದಾರೆ ಮಲ್ಲಿಕಾರ್ಜುನ ಖರ್ಗೆ  ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಇದೇ ಪ್ರಕರಣದಲ್ಲಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ರಾಯಚೂರಿನ ಪೊಲೀಸರು ಸೂಲಿಬೆಲೆ ಅವರಿಗೆ ನೋಟಿಸ್ ನೀಡಲೆಂದು ಬೆಂಗಳೂರಿಗೆ ಬಂದಿದ್ದರು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ನೋಟಿಸ್...
ಬೆಂಗಳೂರುಸಿನಿಮಾಸುದ್ದಿ

ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ – ಕಹಳೆ ನ್ಯೂಸ್

ದೇವರಾಜ್ ಪೂಜಾರಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಕಾಣಲಿದೆ ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್,...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ (ಜ.27) ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ; ಲೋಕಸಭಾ ಚುನಾವಣೆ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ..!? , ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಕುರಿತು ನಿರ್ಣಯ..!! – ಕಹಳೆ ನ್ಯೂಸ್

ಬೆಂಗಳೂರು,ಜ 26 : ನಾಳೆ (ಜ.27) ರಂದು ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.   ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು....
ಬೆಂಗಳೂರುಸಿನಿಮಾಸುದ್ದಿ

‘ನನ್ನಲ್ಲೂ ಸಾಕ್ಷಿಗಳಿವೆ ‘ ; ವಿಜಯಲಕ್ಷ್ಮೀ ದರ್ಶನ್ ಗೆ ಕೌಂಟರ್ ಕೊಟ್ಟ ಪವಿತ್ರಾ ಗೌಡ – ಕಹಳೆ ನ್ಯೂಸ್

ಬೆಂಗಳೂರು, ಜ 26 : ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್​ ಜೊತೆ ಆತ್ಮೀಯವಾಗಿ ಕಾಣಿಸಿಕೊಂಡಿರುವ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕದನ ಶುರುವಾಗಿದೆ. ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಆರೋಪಕ್ಕೆ ಇದೀಗ ಪವಿತ್ರಾ ಗೌಡ ಕೌಂಟರ್ ಕೊಟ್ಟಿದ್ದಾರೆ. ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬುವವರನ್ನು ಮದುವೆಯಾಗಿದ್ದು, ಬಳಿಕ ಖುಷಿ ಹುಟ್ಟಿರುತ್ತಾಳೆ. ಕೆಲ ಕಾರಣದಿಂದ ನಾನು ಸಂಜಯ್ ದೂರಾಗಿದ್ದೇವೆ. ಇಲ್ಲಿಯವರೆಗೆ ಖುಷಿ ನಟ ದರ್ಶನ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ದೇವಾಲಯದ ಆದಾಯ ಕಡಿಮೆ ; ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್‍ನಲ್ಲೇನಿದೆ..? : ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ...
1 33 34 35 36 37 114
Page 35 of 114