ನಾಳೆಯಿಂದ ಪ್ರಾಥಮಿಕ ಶಾಲೆ ಆರಂಭಕ್ಕೆ ಗೈಡ್‍ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ – ಕಹಳೆ ನ್ಯೂಸ್
ಬೆಂಗಳೂರು: ಕೋವಿಡ್ ಕಾರಣದಿಂದ ಸುಮಾರು 20 ತಿಂಗಳು ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ತೆರೆಯಲಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮಕ್ಕಳು ಕೂಡಾ ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿದ್ದು ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗಿದ್ದು ಸೋಮವಾರದಿಂದ...