ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ – ಕಹಳೆ ನ್ಯೂಸ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ ನಿರೂಪಣಾಧಿಕಾರಿಗಳು(ಪಿಒ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ...