ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ನಿಗದಿ- ಕಹಳೆ ನ್ಯೂಸ್
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ....