ದಕ್ಷಿಣ ಭಾರತದ ಸ್ಟಾರ್ ಕಲಾವಿದ ‘ದಳಪತಿ’ ವಿಜಯ್ ಅವರಿಗೆ 46ನೇ ಜನ್ಮದಿನದ ಸಂಭ್ರಮ.-ಕಹಳೆ ನ್ಯೂಸ್
ದಕ್ಷಿಣ ಭಾರತದ ಸ್ಟಾರ್ ಕಲಾವಿದ 'ದಳಪತಿ' ವಿಜಯ್ ಅವರಿಗೆ ಇಂದು (ಜೂ.22) ಜನ್ಮದಿನದ ಸಂಭ್ರಮ. 46ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯ ಆಗಿರುವ ನಟ ವಿಜಯ್ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. ಹಿಟ್ ಸಿನಿಮಾಗಳ ಮೂಲಕ ಅಪಾರ ಅಭಿಮಾನಿ ಬಳಗವನ್ನೂ ಸಂಪಾದಿಸಿದ್ದಾರೆ. ಕೊರೊನಾ ವೈರಸ್ ಹಾವಳಿ ದಿನೇದಿನೆ ಹೆಚ್ಚುತ್ತಿರುವುದರಿಂದ ಅದ್ದೂರಿಯಾಗಿ ವಿಜಯ್ ಬರ್ತ್‌ಡೇ ಸೆಲೆಬ್ರೇಟ್ ಮಾಡಲು ಸಾಧ್ಯವಾಗಿಲ್ಲ....