Monday, February 3, 2025

ಸುದ್ದಿ

ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಫಿಲೋ ಪ್ರತಿಭೆ' ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನವನ್ನು ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಾ ಎಸ್ ಎಸ್, ವೈಷ್ಣವಿ ಯು ಆರ್, ನಿಧಿ ಎಂ ಯು ಮತ್ತು 8ನೇ ತರಗತಿಯ ಇಂಚರ ಎಸ್ ಮಯ್ಯ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು ಇಂದು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಡಾ ಹಗರಣ : ಮುಖ್ಯಮಂತ್ರಿ ತತ್‍ಕ್ಷಣ ರಾಜೀನಾಮೆ ನೀಡಲಿ : ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹ – ಕಹಳೆ ನ್ಯೂಸ್

ಸುರತ್ಕಲ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಯಾಗಿದ್ದು,ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಹೈ ಕೋರ್ಟ್ ಎತ್ತಿ ಹಿಡಿದಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹಿಸಿದ್ದಾರೆ. ಸಚಿವ ಸಂಪುಟದ ಸಚಿವರಲ್ಲಿ ಓರ್ವರು ಈಗಾಗಲೇ ಜೈಲು ಸೇರಿದ್ದಾರೆ. ವಿವಿಧ ಹಗರಣದಲ್ಲಿ ಹಲವು ಮಂದಿ ಸಚಿವರು ಭಾಗಿಯಾಗಿದ್ದು ನಿಮ್ಮ ದಾರಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿರುವ...
ಸುದ್ದಿಹುಬ್ಬಳ್ಳಿ

ಭಗವದ್ಗೀತೆ ಹಾಗೂ ಖುರಾನ್ ಮೂಲಕ ಸಮಾನತೆಯ ಮಂತ್ರ ಜಪಿಸಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು – ಕಹಳೆ ನ್ಯೂಸ್

ಹುಬ್ಬಳ್ಳಿ:ಅವಳಿ ನಗರದಲ್ಲಿ ನಡೆದ ಗಣೇಶ್ಯೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಸಕ್ಸಸ್ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮದಲ್ಲಿ ಭಾಷಣದ ಮೂಲಕ ಎಲ್ಲರ ಗಮನವನ್ನು ಸೆಳೆದರು. ಜಾತಿ ಜಾತಿ ಎಂಬ ಭೇದವನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ,ಎಲ್ಲರೂ ಒಂದೇ ಜಾತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ – ಸಾಹಿತ್ಯ ಚಿಲುಮೆ 2024-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಅದ್ವಯ ಸಾಹಿತ್ಯ ಸಂಘ” ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸಾಹಿತ್ಯ ಚಿಲುಮೆ 2024” ಎಂಬ ಶೀರ್ಷಿಕೆಯಡಿ, ಭಾಷಾ ವಿಭಾಗದ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ವಿಜಯ್ ಕುಮಾರ್ ಎಂ ಸಹ ಪ್ರಾಧ್ಯಾಪಕರು ಕನ್ನಡ ವಿಭಾಗ ಮತ್ತು ಉಪ ಪ್ರಾಂಶುಪಾಲರು ಸಂತ ಫಿಲೋಮಿನ ಕಾಲೇಜ್ ಪುತ್ತೂರು...
ಉಡುಪಿಉತ್ತರಕನ್ನಡರಾಜ್ಯಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ : ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.   ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವAತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ-ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿAದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನ್ಯಾಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ : ಶಾಸಕ ವೇದವ್ಯಾಸ ಕಾಮತ್ ಆಗ್ರಹ – ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಗೌರವಾನ್ವಿತ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಖ್ಯಮಂತ್ರಿಗಳ ಕುಟುಂಬದ ಪರವಾಗಿ ಅಕ್ರಮ ನಡೆದಿರುವುದು ದಾಖಲೆಗಳ ಸಮೇತ ಕಣ್ಣಿಗೆ ರಾಚುತ್ತಿದ್ದರೂ ನಾನ್ಯಾಕೆ ರಾಜೀನಾಮೆ...
1 145 146 147 148 149 2,763
Page 147 of 2763