ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್ ಗಾಂಧಿ ವಿರುದ್ಧ 3 ಎಫ್ಐಆರ್ – ಕಹಳೆ ನ್ಯೂಸ್
ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...