ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸಂಸದ ಕ್ಯಾ. ಚೌಟ ; ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ-ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬAಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ...