ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ – ಕಹಳೆ ನ್ಯೂಸ್
ಅಂಬಿಕಾ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್ ಸಾಮೆತ್ತಡ್ಕ, ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ, ಪುಲಕಿತ ಹಾಗೂ ದ್ವಿತೀಯ ಪಿಯುಸಿಯ ಹರ್ಷಿತ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್ ರೈ,...