ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ – ಕಹಳೆ ನ್ಯೂಸ್
ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ತಾ.ಪಂ.ಎಸ್ಜಿಎಸ್ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜಯಂತಿ ಕಾರ್ಯಕ್ರಮಕ್ಕೆ ವೀಕ್ಷಕರು ಬದಲಾಗಬೇಕಿದ್ದು, ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೆ ಮುಟ್ಟಿಸುವ ಕಾರ್ಯ ನಡೆಯಬೇಕು. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಸರ್ವರಿಗೂ ಆದರ್ಶರಾಗಬೇಕು ಎಂದರು. ತಹಶೀಲ್ದಾರ್ ಅರ್ಚನಾ ಭಟ್ ಮಾತನಾಡಿ, ಕೆಂಪೇಗೌಡರ ಕೆರೆ ನಿರ್ವಹಣೆಯ ಸಾಧನೆಯು ವಿಶೇಷವಾಗಿದ್ದು, ಜತೆಗೆ ಅಭಿವೃದ್ಧಿಗೂ ವಿಶೇಷ ಆದ್ಯತೆ...