Wednesday, February 12, 2025

ಸುದ್ದಿ

ಉಡುಪಿಸುದ್ದಿ

ಜುಲೈ 1ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಣಿಪಾಲ ಎಂಐಸಿ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ಇದರ ಪ್ರೋಫೆಸರ್ ಆಫ್ ಪ್ರಾಕ್ಟಿಸ್ ಸತ್ಯಬೋಧ ಜೋಶಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಟ್ಯಾಂಕರ್ – ಕಹಳೆ ನ್ಯೂಸ್

ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ. ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ, ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳುಲು ಸೂಚಿಸಿದೆ. ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮೇಪ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ.. ಸಂತೋಷ್ ಕುಮಾರ್ ಶೆಟ್ಟಿ– ಕಹಳೆ ನ್ಯೂಸ್

ಕಲ್ಲಡ್ಕ: ಶಿಕ್ಷಣವು ವೈಜ್ಞಾನಿಕತೆಯ ಜೊತೆಯಲ್ಲಿ ಬೆಳೆದು ಸಂಸ್ಕೃತಿಯ ಬೇರುಗಳಿಂದ ಗಟ್ಟಿಯಾದಾಗ ಉತ್ತಮ ಸಂಸ್ಕಾರಯುತ ಪ್ರಜೆಯನ್ನು ಕಾಣಬಹುದು. ಒಂದು ವಿದ್ಯಾಸಂಸ್ಥೆಯು ಊರಿಗೊಂದು ಕಳಶವಿದ್ದಂತೆ ಅದಕ್ಕೆ ಸ್ಪಂದಿಸುವ ಹಲವಾರು ಕೈಗಳಿಂದ ಅಭಿವೃದ್ಧಿಯನ್ನು ಹೊಂದುತ್ತಾ ಸಾಗುತ್ತದೆ.ನನ್ನ ಶಾಲೆ ಎಂಬ ಭಾವನೆಯು ಎಲ್ಲರಲ್ಲಿ ಮೂಡಿದಾಗ ಪೋಷಕರು ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳ ನಡುವಿನ ಬಂಧವು ಬಿಗಿಯಾಗುತ್ತದೆ ಆಗ ಉತ್ತಮ ಫಲಿತಾಂಶ ದೊರಕಲು ಸಾಧ್ಯವಾಗುತ್ತದೆ. ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕೃಷಿ ಸಖಿಯರಿಗೆ ನರೇಗಾ ಯೋಜನೆ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಾಲೂಕು ಪಂಚಾಯತ್‌ ಬಂಟ್ವಾಳ ಹಾಗೂ ತೋಟಗಾರಿಕೆ ಇಲಾಖೆ ಇದರ ಆಶ್ರಯದಲ್ಲಿ ತಾಲೂಕಿನ ಕೃಷಿ ಸಖಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್‌ ಹೊಳ್ಳ, ಯೋಜನೆಯ ಸವಲತ್ತುಗಳನ್ನು ಗ್ರಾಮದ ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಕೃಷಿ ಸಖಿಯರ ಮೇಲಿದೆ. ವೈಯಕ್ತಿಕ ಆಸ್ತಿ ಸೃಜನೆಗೆ ಸಹಾಯಧನ ನೀಡುವ ಅತ್ಯುತ್ತಮ ಯೋಜನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಕ್ಷಾ ತೊಳೆಯುತಿದ್ದ ವೇಳೆ ವಿದ್ಯುತ್ ತಂತಿ ಕಡಿದು ಬಿದ್ದು ಚಾಲಕ ಸಹಿತ ಇಬ್ಬರು ದುರ್ಮರಣ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅವ್ಯಾಹತವಾಗಿ ಗಾಳಿ ಮಳೆ ಸುರಿಯುತ್ತಿದ್ದು ಅಲ್ಲ್ಲಲ್ಲಿ ಅನಾಹುತಕ್ಕೆ ಕಾರಣವಾಗಿದೆ. ಮಂಗಳೂರು ನಗರದ ರೋಸಾರಿಯೊ ಶಾಲೆಯ ಬಳಿ ಇಬ್ಬರು ರಿಕ್ಷಾ ಚಾಲಕರು ವಿದ್ಯುತ್ ತಂತಿ ತಗಲಿ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ ಸಂಭವಿಸಿದೆ. ರಿಕ್ಷಾ ತೊಳೆಯುತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಮೃತರನ್ನು ಹಾಸನ ಮೂಲದ ರಾಜು ಮತ್ತು ಕಡಬ ವ್ಯಾಪ್ತಿಯ ರಾಮಕುಂಜದ ದೇವರಾಜ್ ಎಂದು ತಿಳಿದು ಬಂದಿದೆ.ಇವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ತಡರಾತ್ರಿ ಸುರಿದ ಭಾರೀ ಮಳೆಗೆ ಮನೆ ಮೇಲೆ ಕುಸಿದು ಬಿದ್ದ ಧರೆ : ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು ! – ಕಹಳೆ ನ್ಯೂಸ್

ಪುತ್ತೂರು: ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜುಲೈ 1 ರಂದು ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ; ಬಡ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಾಣ ವಾಗ್ದಾನ – ಕಹಳೆ ನ್ಯೂಸ್

ಪುತ್ತೂರು : ಜುಲೈ 1 ರಂದು ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಬಡ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಾಣ ವಾಗ್ದಾನ ಕಾರ್ಯಕ್ರಮ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ....
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ನಾಳೆ (ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು,ಜೂ 26 : ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ....
1 263 264 265 266 267 2,776
Page 265 of 2776