ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ.
ಶ್ರೀನಗರ : ಇಲ್ಲಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಬಿಎಸ್‌ಎಫ್ ಕ್ಯಾಂಪ್ ಗುರಿಯಾಗಿರಿಸಿಕೊಂಡು ಉಗ್ರರು ಮಂಗಳವಾರ ನಸುಕಿನ ವೇಳೆ ದಾಳಿ ನಡೆಸಿದ್ದು, ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ಕಾರಣಗಳಿಗಾಗಿ ತಾತ್ಕಾಲಿಕವಾಗಿ ಎಲ್ಲಾ ವಿಮಾನಗಳ ಸಂಚಾರವನ್ನು ಸ್ಥಗಿತ ಗೊಳಿಸಲಾಗಿರುವ ಬಗ್ಗೆ ವರದಿಯಾಗಿದೆ. ನಸುಕಿನ 4 ಗಂಟೆಯ ವೇಳೆ ಉಗ್ರರು ಹೊಂಚು ದಾಳಿ ನಡೆಸಿದ್ದು , ಕೆಲ ಉಗ್ರರು ಸಮೀಪದ ಪಕ್ಕದ...