ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿ ಆಚರಿಸುತ್ತೇವೆ | ಸಿ.ಎಂ. ಮಂಗಳೂರಿನಲ್ಲಿ ಹೇಳಿಕೆ.
ಮಂಗಳೂರು : 'ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ. 'ಟಿಪ್ಪು ಜಯಂತಿಯನ್ನು ವಿರೋಧಿಸುವವರು ಮೊದಲು ಇತಿಹಾಸ ತಿಳಿದುಕೊಳ್ಳಲಿ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಿದ್ದೇವೆ. ಯಾರೇ ಬರಲಿ ಬಿಡಲಿ ನಾವು ಟಿಪ್ಪು...