Monday, January 20, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‌ಇ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ;ದೈನಂದಿನ ಜೀವನದ ಎಲ್ಲಾ ಚಟುವಟಿಕೆಯಲ್ಲಿ ಗಣಿತ ಬೆರೆತುಹೋಗಿದೆ : ಸುಬ್ರಹ್ಮಣ್ಯ-ಕಹಳೆ ನ್ಯೂಸ್

ಪುತ್ತೂರು: ಶ್ರೇಷ್ಠ ಭಾರತೀಯ ಗಣಿತ ತಜ್ಞ ರಾಮಾನುಜನ್ ಅವರು ಗಣಿತದ ಬಗ್ಗೆ ಅಪಾರವಾಗಿ ಒಲವನ್ನು ಹೊಂದಿದ್ದವರು. ಸಂಖ್ಯೆಯ ವಿಭಾಗವನ್ನು ಬೇರೆ ಬೇರೆ ರೀತಿಯಲ್ಲಿ ಮಾಡಿ ತೋರಿಸಿದವರಲ್ಲದೇ, ಅನೇಕ ರೀತಿಯ ಪ್ರಮೇಯವನ್ನು ರಚಿಸಿದವರು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಸುಬ್ರಹ್ಮಣ್ಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾಸಂಸ್ಥೆಯಲ್ಲಿ ಸೋಮವಾರ ನಡೆಸಿದ ಗಣಿತ ದಿನಾಚರಣೆಯ ಮುಖ್ಯ...
ದೆಹಲಿಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರವನ್ನು ಇಂದು ನೆರವೇರಿಸಲಾಗುತ್ತದೆ. ಇದಕ್ಕೂ ಮುನ್ನ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಡೆದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ನಯಾಕರು ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಇಂದು ದೆಹಲಿಗೆ ತೆರಳಿರುವಂತ...
ದೆಹಲಿಸಂತಾಪಸುದ್ದಿ

‘ಡಾ.ಮನಮೋಹನ್ ಸಿಂಗ್’ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ರಾಷ್ಟ್ರಪತಿ ‘ದ್ರೌಪದಿ ಮುರ್ಮು.!- ಕಹಳೆ ನ್ಯೂಸ್

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.  ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ...
ಉಡುಪಿಕಾಪುಸುದ್ದಿ

ಕಟಪಾಡಿ ಮಣಿಪುರ ಮುಖ್ಯ ರಸ್ತೆಯಿಂದ ಸತೀಶ್ ಬಿಲ್ಲವ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ  ಗುದ್ದಲಿ ಪೂಜೆ  ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟಪಾಡಿ ಮಣಿಪುರ ಮುಖ್ಯ ರಸ್ತೆಯಿಂದ ಸತೀಶ್ ಬಿಲ್ಲವ ಮನೆಗೆ ಹೋಗುವ ರಸ್ತೆಗೆ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ ಅಧ್ಯಕ್ಷರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಜೋಸೆಫ್ ಮೊಂತೆರೊ, ಗುತ್ತಿಗೆದಾರರಾದ ಮಹೇಶ್ ಶೆಟ್ಟಿ, ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು : ಮೂವರು ದುರ್ಮರಣ – ಕಹಳೆ ನ್ಯೂಸ್

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಜನ ಜಮಾಯಿಸಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

“ಹವ್ಯಕ ಸಾಧಕ ರತ್ನ ಪ್ರಶಸ್ತಿ”ಗೆ ಆಯ್ಕೆಯಾದ ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲಕೃಷ್ಣ ಭಟ್- ಕಹಳೆ ನ್ಯೂಸ್

ಪುತ್ತೂರು: ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋಪಾಲಕೃಷ್ಣ ಭಟ್ ರವರು ಅಖಿಲ ಹವ್ಯಕ ಮಹಾಸಭಾ(ರಿ.) ಬೆಂಗಳೂರು ಇವರು ಕೊಡಮಾಡುವ ‘ ಹವ್ಯಕ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಡಿ.27 ರಂದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಗೋಪಾಲಕೃಷ್ಣ ಭಟ್ ರವರ ಪರಿಚಯ..!!! 1983ನೇ ಇಸವಿ ಫೆಬ್ರವರಿ 21 ರಂದು ಪ್ರಸಿದ್ಧ ಕಿಜಕ್ಕಾರು ಮನೆತನದಲ್ಲಿ ಶ್ರೀಯುತ ಹರಿಕೃಷ್ಣ ಭಟ್ ಮತ್ತು ಶ್ರೀಮತಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಶತದಿನೋತ್ಸವದತ್ತ ಪಯಣ್ ಕೊಂಕಣಿ ಸಿನೆಮಾ-ಕಹಳೆ ನ್ಯೂಸ್

ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ ಪಯಣ್ ಸಿನಿಮಾ ತಂಡವು ಪಯಣ್ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ....
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ ಯಾರಿಗೂ ಹೇಳದೆ ಮನೆಗೆ...
1 29 30 31 32 33 2,747
Page 31 of 2747