ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ ಯೋಜನೆ ಒಪ್ಪಿಗೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ಸಂಸದ ಕ್ಯಾ. ಚೌಟ ಅವರಿಂದ ರಕ್ಷಣಾ ಕಾರ್ಯದರ್ಶಿ ಭೇಟಿ -ಕಹಳೆ ನ್ಯೂಸ್
ನವದೆಹಲಿ: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಸಿಂಗ್ ಅವರನ್ನು ಭೇಟಿಯಾದ ಸಂಸದರು, ಕರಾವಳಿ ತೀರದ ಕಣ್ಗಾವಲು, ಭದ್ರತೆ ನೌಕಾ ಪಡೆಗೆ ಪ್ರತ್ಯೇಕ ವಿಶ್ವದರ್ಜೆಯ ತರಬೇತಿಗಾಗಿ 2017ರಲ್ಲಿ...