ಬಂಟ್ವಾಳ: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ಕಾರ್ಗಲ್‌ನಲ್ಲಿ ನಿಯಂತ್ರಣತಪ್ಪಿ ಪಲ್ಟಿ-ಕಹಳೆ ನ್ಯೂಸ್
ಬಂಟ್ವಾಳ: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾಗಿದೆ, ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದಂತೆ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೂ ಗಾಯಗಳಾಗಿದ್ದು ಸಮೀಪವಿರುವ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಭೂರುವಿನಲ್ಲಿರುವ ಶ್ರೀಸಾಯಿ ಮಂದಿರದಿAದ ಜೋಗ್ ಫಾಲ್ಸ್ ಗೆ ಪ್ರವಾಸ ಹೋಗಿದ್ದ ಖಾಸಗಿ ಬಸ್ ಜೋಗ್ ಫಾಲ್ಸ್ ಗೆ ಇನ್ನೇನು...