ಮಹಾರಾಷ್ಟ್ರದ ಮುಂದಿನ ಸಿಎಂ ಯಾರು..? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ – ಕಹಳೆ ನ್ಯೂಸ್
ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು. ಬಿಜೆಪಿ...