ಎಸ್ ಪಿಬಿ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿವಿ ಅನುಮೋದನೆ – ಕಹಳೆ ನ್ಯೂಸ್
ಮೈಸೂರು : ಖ್ಯಾತ ಹಿರಿಯ ಗಾಯಕ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ಮೈಸೂರು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ಸಂಗೀತ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಮೈಸೂರು ವಿಶ್ವ ವಿದ್ಯಾಲಯದಲ್ಲಿ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆಗೆ ಬುಧವಾರ ನಡೆದ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಅನುಮೋದನೆ ದೊರಕಿದೆ. ಸಂಗೀತದ ಎಲ್ಲಾ ಪ್ರಕಾರಗಳ ಬಹುಮುಖ ಬೆಳವಣಿಗೆಗಾಗಿ ಪೀಠ ಸ್ಥಾಪಿಸಲಾಗುತ್ತಿದೆ. ವಿವಿಯ ಲಲಿತ ಕಲೆಗಳ ಕಾಲೇಜಿನಲ್ಲಿ...