ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ : ಸಿಎಂ ಬಿಎಸ್ವೈ-ಕಹಳೆನ್ಯೂಸ್
ಬೆಂಗಳೂರು,ಅ.21- ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೋವಿಡ್-19 ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಉತ್ತರಕರ್ನಾಟಕದ ಭಾಗದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ...