ಪ್ರಧಾನಿಯವರಿಂದ ಮೈಸೂರು ವಿವಿ ಘಟಿಕೋತ್ಸವ ಭಾಷಣ-ಕಹಳೆ ನ್ಯೂಸ್
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ 100ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘಟಿಕೋತ್ಸವ ಭಾಷಣ ಮಾಡುತ್ತಿದ್ದು, ಅದರ ನೇರ ಪ್ರಸಾರ ವೀಕ್ಷಣೆಗೆ ಮೇಲಿನ ವಿಡಿಯೋ ಕ್ಲಿಕ್ಕಿಸಬಹುದು. ಪ್ರಧಾನಿ ನರೇಂದ್ರಮೋದಿಯವರ ಭಾಷಣದ ಸಾರ ಇಲ್ಲಿದೆ. ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯಗಳು. ಕೆಲವೊಂದು ಛಾಯಾಚಿತ್ರಗಳನ್ನು ಗಮನಿಸುತ್ತಿದ್ದೆ. ಕೋವಿಡ್ 19ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೇನೂ ಕೊರತೆ ಇಲ್ಲ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ತೊಂದರೆಯಾಗಿದೆ. ಸಂತ್ರಸ್ತರ ಬಗ್ಗೆ ನನ್ನ...