ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ನೂತನ ಶಿಕ್ಷಣ ನೀತಿ-2020 ಪ್ರಮುಖ ಪಾತ್ರ ವಹಿಸುತ್ತದೆ:ಪ್ರಧಾನಿ ಮೋದಿ -ಕಹಳೆ ನ್ಯೂಸ್
ನವದೆಹಲಿ:ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಧ್ಯಯನಕ್ಕಿಂತ ಮಕ್ಕಳ ಕಲಿಕೆಗೆ ಹೆಚ್ಚು ಆದ್ಯತೆ ನೀಡುತ್ತದೆ. ದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ ನೀತಿ ಮತ್ತು ಶಿಕ್ಷಣ ವ್ಯವಸ್ಥೆ ಪ್ರಮುಖ ಸಾಧನಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದ ವರ್ಚುವಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಕೇಂದ್ರ ಸರ್ಕಾರದವರೆಗೆ ಎಲ್ಲರೂ ಜವಾಬ್ದಾರರಾಗಿರುತ್ತಾರೆ. ಆದರೆ ಶಿಕ್ಷಣ...