ಪಶ್ಚಿಮ ಬಂಗಾಳಕ್ಕೆ ಎರಡು ದಿನದ ಪ್ರವಾಸಕ್ಕಾಗಿ ಆಗಮಿಸಿದ ಗೃಹ ಸಚಿವ ಅಮಿತ್ ಶಾ- ಕಹಳೆ ನ್ಯೂಸ್
ಕೋಲ್ಕತ್ತ: ಬಿಜೆಪಿ ನಾಯಕ, ಕೇಂದ್ರ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲೇಬೇಕೆಂದು ಪಣ ತೊಟ್ಟು, ಬಂಗಾಳದಲ್ಲಿ ಇಂದಿನಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಅಮಿತ್ ಶಾ ಅವರನ್ನು ಪಕ್ಷದ ನಾಯಕರು ಸ್ವಾಗತಿಸಿದರು. ಎರಡು ದಿನಗಳ ಪ್ರವಾಸದಲ್ಲಿ ಅಮಿತ್ ಶಾ ಅವರು, ಮಿಡ್ನಾಪುರ, ಬೋಲಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ವೇಳೆ ಸಿದ್ದೇಶ್ವರಿ ಮಹಮಾಯ ದೇವಾಲಯ, ಸ್ವಾಮಿ ವಿವೇಕಾನಂದರ ವಂಶಸ್ಥರ...