ತಾತನಾದ ಸಂಭ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ – ಕಹಳೆ ನ್ಯೂಸ್
ಮುಂಬೈ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ, ರಿಲಾಯನ್ಸ್ ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ತಾತನಾದ ಸಂಭ್ರಮದಲ್ಲಿದ್ದಾರೆ. ಮುಕೇಶ್ ಅಂಬಾನಿ-ನೀತಾ ಅಂಬಾನಿಯವರ ಮಗ ಆಕಾಶ್ ಅಂಬಾನಿ ಅವರ ಪತ್ನಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಮುಕೇಶ್ ದಂಪತಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಮಗು ಜನನವಾಗಿದೆ ಎಂದು...