ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆ ಸಾವು- ಕಹಳೆ ನ್ಯೂಸ್
ಹನೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆಯೊಂದು ಮೃತಪಟ್ಟಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಉದ್ಧಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿನ ಶಿವಕುಮಾರ್ ಎಂಬವರು ತಾವು ಬೆಳೆದ ಫಸಲನ್ನು ವನ್ಯ ಪ್ರಾಣಿಗಳನ್ನು ರಕ್ಷಿಸುವ ಸಲುವಾಗಿ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿಯನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡಿದ್ದರು. ಈ ನಡುವೆ ಬಿಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಸುಮಾರು 32...