ಪುತ್ತೂರು ಗೇರು ಸಂಶೋಧನಾ ಕೇಂದ್ರದ ಎರಡು ತಳಿ ಪ್ರಧಾನಿ ನರೇಂದ್ರ ಮೋದಿಯಿಂದ ಬಿಡುಗಡೆ – ಕಹಳೆ ನ್ಯೂಸ್
ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ. ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ....