ಹಣದುಬ್ಬರ ಇಳಿಸಲು ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ..! : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ..! – ಕಹಳೆ ನ್ಯೂಸ್
ಆ.15 ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಣದುಬ್ಬರ ಇಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಮತ್ತು ಈ ಪ್ರಕ್ರಿಯೆ ಮುಂದುವರೆಸಲಿದೆ ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಪೆಟ್ರೋಲ್ ಮತ್ತು ಆಹಾರ ವಸ್ತುಗಳನ್ನು ಅಗ್ಗ ಮಾಡಲು ಮುಂದಾಗಿದೆ ಎಂದು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ ಎಂದು ಮೂಲಗಳು...