ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು 2 ತಿಂಗಳಲ್ಲಿ ಖಾಯಂ : ಸಚಿವ ಗೋವಿಂದ ಕಾರಜೋಳ ಭರವಸೆ – ಕಹಳೆ ನ್ಯೂಸ್
ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು...