ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ ನ್ಯೂಸ್
ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...