ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಗಣೇಶೋತ್ಸವ ; ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಪಾಲಿಕೆಗೆ ಹಿಂದೂ ಸಂಘಟನೆಗಳ ಮನವಿ – ಆ.15ರಂದು ಸಭೆ – ಕಹಳೆ ನ್ಯೂಸ್
ಹುಬ್ಬಳ್ಳಿ: ಬೆಂಗಳೂರಿಗೆ ಸೀಮಿತವಾಗಿದ್ದ ಈದ್ಗಾ ಮೈದಾನ ವಿವಾದ ಈಗ ನಿಧಾನವಾಗಿ ರಾಜ್ಯವ್ಯಾಪಿ ಹಬ್ಬುತ್ತಿದ್ಯಾ ಎಂಬ ಪ್ರಶ್ನೆ ಎದುರಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನ ಮತ್ತೆ ಮುನ್ನೆಲೆಗೆ ಬಂದಿದೆ. ಇದರಿಂದ ಇಷ್ಟು ದಿನ ತಣ್ಣಗಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನದ ವಿವಾದ ಮತ್ತೆ ಪುಟಿದೇಳುವ ಲಕ್ಷಣಗಳು ಗೋಚರವಾಗುತ್ತಿವೆ. ವಿವಾದದ ಕೇಂದ್ರ ಬಿಂದುವಾಗಿರುವ ಈ ಸ್ಥಳದಲ್ಲಿ ಇದೇ ಮೊದಲ ಬಾರಿಗೆ ಗಣೇಶ ಪ್ರತಿಷ್ಠಾಪನೆ ಮಾಡಲು ಚಿಂತನೆ ನಡೆದಿದೆ. ರಾಣಿ ಚೆನ್ನಮ್ಮ ಈದ್ಗಾ...