ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಎಂ, ಜಿಲ್ಲಾಧಿಕಾರಿ ಸಹಿ ನಕಲು; ಕೋಟ್ಯಂತರ ರೂ. ಪಂಗನಾಮ ಹಾಕಿದ ವ್ಯಕ್ತಿ ಅರೆಸ್ಟ್-ಕಹಳೆ ನ್ಯೂಸ್
ಮಂಡ್ಯ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುವುದರ ಜತೆಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ವಂಚನೆ ಮಾಡಿದ ಆರೋಪದ ಮೇರೆಗೆ ನಕಲಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಈತನಿಂದ ನಕಲಿ ನೇಮಕಾತಿ ಪತ್ರ, ಗುರುತಿನ ಚೀಟಿ, ಟ್ಯಾಗ್ ಸೇರಿದಂತೆ ಮಹತ್ವದ ದಾಖಲೆಯನ್ನು ವಶಕ್ಕೆ ಪಡೆಯಲಾಗಿದೆ. ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಲವರಿಗೆ ವಂಚನೆ ಮಾಡಿದ ಆರೋಪದ ಮೇಲೆ ಮಂಡ್ಯ ನಗರದ...