ದಕ್ಷತೆಗೆ ಹೆಸರಾಗಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕಿರಿಕ್ ಮಾಡಿ ಸುದ್ದಿಯಾಗಿದ್ದ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ – ಕಹಳೆ ನ್ಯೂಸ್
ಬೆಂಗಳೂರು: ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...