Saturday, January 18, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಿಳಿಯೂರಿನ ತಿಪ್ಪಕೋಡಿ ಮನೆಯಂಗಳದಲ್ಲಿ ಜ.22ರಂದು ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಉಪ್ಪಿನಂಗಡಿ : ಬಿಳಿಯೂರಿನ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಯವರ ಮನೆಯಂಗಳದಲ್ಲಿ ಜ.22ರ ಸಂಜೆ 6 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಅಪರಾಹ್ನ 3.30ರಿಂದ 5.30ರವರೆಗೆ ಶ್ರೀ ದುರ್ಗಾ ಮಹಾಲಕ್ಷ್ಮೀ ಭಜನಾ ಮಂಡಳಿ ಶ್ರೀಧಾಮ ಮಾಣಿಲದವರಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ ಶ್ರೀ ದೇವಿಯ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರು ಬ್ಯಾಂಕ್ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಕೆ ಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ದುಷ್ಕರ್ಮಿಗಳ ಗ್ಯಾಂಗ್ ಹಾಡಹಗಲೇ ನುಗ್ಗಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಹಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.09ರಿಂದ ಫೆ.11ರವರೆಗೆ ಕುಂಜೂರುಪಂಜದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್

ಶ್ರೀ ದುರ್ಗಾ ಭಜನಾ ಮಂದಿರ (ರಿ.) ಕುಂಜೂರುಪಂಜ ಇದರ 22ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳಾದ ಇರುವೆರ್ ಉಳ್ಳಾಕುಲು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಫೆ.09ರಿಂದ ಫೆ.11ರವರೆಗೆ ನಡೆಯಲಿದೆ. ಫೆ.09ರಂದು ಹೊರಕಾಣಿಕೆ ನಡೆದು, ಫೆ.10ರಂದು ಬೆಳಿಗ್ಗೆ ಗಂಟೆ 8-48ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವೇದಮೂರ್ತಿ ಶ್ರೀ ಉದಯ ನಾರಾಯಣ ಕಲ್ಲೂರಾಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ-ಕಹಳೆ ನ್ಯೂಸ್

ಮಂಗಳೂರು: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಆಂಗ್ಲಮಾಧ್ಯಮ ಶಾಲಾ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭ: ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭವು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ  ಎಡನೀರು ಮಠ, ಕಾಸರಗೋಡು ಇವರ ದಿವ್ಯ ಹಸ್ತದಿಂದ ನೆರವೇರಿತು. ಮೊದಲಿಗೆ ಗಣಪತಿ ಹೋಮವು ಶ್ರೀ ಸೂರ್ಯ ನಾರಾಯಣ ಭಟ್ ಕಶೆಕೋಡಿ ಇವರ ನೇತೃತ್ವದಲ್ಲಿ ನಡೆಯಿತು. ಕುಮಾರಿ ಪದ್ಮಶ್ರೀ ಪ್ರಾರ್ಥಿಸಿದರು. ಉದ್ಘಾಟನಾ ಸಮಾರಂಭದ ಆಶೀರ್ವಚನದಲ್ಲಿ ಸ್ವಾಮೀಜಿಯವರು ಯಾವುದೇ ಸಂಸ್ಕಾರ ವಿಲ್ಲದ ವಿದ್ಯೆ ಪರಿಮಳವಿಲ್ಲದ ಪುಷ್ಪದಂತೆ ಹಾಗೂ ರುಚಿ ಇಲ್ಲದ ಹಣ್ಣಿನಂತೆ ಎನ್ನುತ್ತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ ;ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್

ಪುತ್ತೂರು: ಸಂಕ್ರಾಂತಿ ದಿನದಿಂದ ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನವನ್ನು ಪ್ರಕೃತಿ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸುವ ಹಬ್ಬವೆಂದು ಪರಿಗಣಿಸಲಾಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಮಕರ ಸಂಕ್ರಾಂತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ. ; ಮುಲ್ಲೈ ಮುಗಿಲನ್ -ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾಡಳಿತಗಳ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿರುವ ಕರ್ನಾಟಕ ಕ್ರೀಡಾಕೂಟಕ್ಕೆ 2024-25ನೇ ಸಾಲಿನ ಬಜೆಟ್‌ನಲ್ಲಿ 5 ಕೋಟಿ ರೂ.ಗಳನ್ನು ಸರಕಾರ ಒದಗಿಸಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಜ. 17ರಂದು ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಸಮಾರೋಪ ಸಮಾರಂಭ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದೈವ ನರ್ತಕರಾದ ಡಾ. ರವೀಶ್ ಪಡುಮಲೆ ಅವರಿಗೆ ಇಂದು ಆದಿಪಡುಮಲೆ ಮಾಡದಲ್ಲಿ ಕಿವಿಗೆ ಕರ್ಣಕುಂಡಲ -ಕಹಳೆ ನ್ಯೂಸ್

ಪಡುಮಲೆ: ಕುಂಬಳೆ ಮೂರು ಸಾವಿರ ಸೀಮೆಯ ಪ್ರಧಾನ ಅರಸು ದೈವಗಳಾದ ಉಳ್ಳಾಕುಲು ದೈವಗಳಿಗೆ ಇನ್ನು ಮುಂದಕ್ಕೆ ಆದಿ ಪಡುಮಲೆಯಿಂದ ಅಂತ್ಯ ಪುತ್ಯೆಯ ವರೆಗೆ ನರ್ತನ ಸೇವೆಯನ್ನು ಮಾಡಲಿರುವ ನೂತನ ದೈವ ನರ್ತಕರಾದ ಡಾ. ರವೀಶ್ ಪಡುಮಲೆಯವರಿಗೆ ಇಂದು ಆದಿಪಡುಮಲೆ ಮಾಡದಲ್ಲಿ ಕಿವಿಗೆ ಕರ್ಣಕುಂಡಲವನ್ನು ಇಡಲಾಯಿತು....
1 2 3 511
Page 1 of 511