ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75ಲಕ್ಷ...