ನಿಷೇಧದ ನಡುವೆಯು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರಿಸಿದ ಘನ ವಾಹನ : ಚಾಲಕನ ನಿರ್ಲಕ್ಷ್ಯದಿಂದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡ ಗೂಡ್ಸ್ ಟೆಂಪೋ – ಕಹಳೆ ನ್ಯೂಸ್
ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ಟಾಟಾ ಕಂಪೆನಿಯ ಮಸಾಲೆ ಪೌಡರ್ ಮಾರ್ಕೆಟಿಂಗ್ ಮಾಡುತ್ತಿದ್ದ ಏಸ್ ಗೂಡ್ಸ್ ಟೆಂಪೊವೊAದು ಚಾಲಕನ ನಿರ್ಲಕ್ಷ್ಯದಿಂದ ಬಿ.ಸಿ.ರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದಾಗ ಅದು ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ...