ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರಿಗೆ `ಸಹಕಾರಿ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್
ಪುತ್ತೂರು:ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರು ರಾಜ್ಯ ಸರಕಾರದಿಂದ ಕೊಡಲ್ಪಡುವ `ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ಚಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್ ವಾಣಿಜ್ಯ ಪದವೀಧರರಾಗಿರುತ್ತಾರೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ೮ ವರ್ಷ ಅಧ್ಯಕ್ಷ, ೧೫ ವರ್ಷ ನಿರ್ದೇಶಕ, ದ.ಕ ಸಹಕಾರಿ...