Sunday, January 19, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಮಿಥುನ್ ರೈ ಪೋಸ್ಟ್ ಮಾಡಿರುವುದೇನು ? https://www.facebook.com/756824464358589/posts/4207736275934040/ ನನಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢ ; ಆಸ್ಪತ್ರೆ ಗೇಟ್ ಮುರಿದು ಬಾಣಂತಿ – ಮಗು ಕರೆದೊಯ್ದು ಪತಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜು 17 ;ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆರಿಗೆಯಾದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪತಿ ಗೇಟ್ ಬೀಗ ಮುರಿದು ಆಸ್ಪತ್ರೆ ಪ್ರವೇಶಿಸಿದ್ದು ಮಗು ಮತ್ತು ಬಾಣಂತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಇಲ್ಲಿನ  ನಾವೂರು ಗ್ರಾಮದ ಮಹಿಳೆ ಬುಧವಾರ ಇಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು.ಈ ಸಂದರ್ಭ ಅವರ ಗಂಟಲದ್ರವ ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು.ಈ ನಡುವೆ ಬುಧವಾರ ರಾತ್ರಿಯೇ ಅವರಿಗೆ ಹೆರಿಗೆ ಆಗಿತ್ತು.ಗುರುವಾರ ಸಂಜೆ ಕೊರೊನಾ...
ದಕ್ಷಿಣ ಕನ್ನಡಸುದ್ದಿ

ಖಾಸಗಿಯಲ್ಲಿ ಉಚಿತ ಕೊರೊನಾ ಚಿಕಿತ್ಸೆ- ಎಲ್ಲಿ, ಹೇಗೆ ? ; ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಗಳೂರು, ಜು. 16 : ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಜನತೆಯಲ್ಲಿನ ಗೊಂದಲ ದೂರವಾದಂತಾಗಿದೆ.   ಕೊರೊನಾ ಪಾಸಿಟಿವ್ ಹೊಂದಿದ್ದು, ಯಾವುದೇ ರೋಗಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಅದರೊಂದಿಗೆ ಶೌಚಾಲಯ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್

ಬಂಟ್ವಾಳ‌‌‌, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ.   ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್‌ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್‌‌.ವಿ.ಎಸ್‌‌ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್‌ ಶಾಲೆಯಲ್ಲಿ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆಯ 238 ಮಂದಿಗೆ ಕೊರೊನಾ ಪಾಸಿಟಿವ್ ; ಮುಂದುವರಿದ ಮರಣ ಮೃದಂಗ – ಇಂದು ಒಂದೇ ದಿನ ಆರು ಮಂದಿ ಬಲಿ..! – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನ‌ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಮತ್ತೆ ಆರು ಮಂದಿ ಕೊರೊನಾಕ್ಕೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ‌ ಆರು ಮಂದಿ ಕೊರೋನಾ ದಿಂದ ಬಲಿಯಾಗಿದ್ದು, ಮಂಗಳೂರಿನ ಮುಲ್ಕಿ ನಿವಾಸಿ 44 ವರ್ಷದ ವ್ಯಕ್ತಿ, ಬೆಳಗಾವಿಯ ರಾಮದುರ್ಗ ನಿವಾಸಿ 68 ವರ್ಷದ ವೃದ್ಧ, ಮಂಗಳೂರಿನ 62 ವರ್ಷದ ವೃದ್ಧ, ಮಂಗಳೂರಿನ 66 ವರ್ಷದ ವೃದ್ಧ,...
ದಕ್ಷಿಣ ಕನ್ನಡಸುದ್ದಿ

ದ.ಕ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ – ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು- ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ ಆಗಲಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ.ಮಂಗಳೂರಿನ ಕದ್ರಿ ಮಾರುಕಟ್ಟೆಯಲ್ಲಿ ಜನರು ಸಾಮಾಜಿಕ ಅಂತರವನ್ನು ಮರೆತು ದಿನಸಿ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.ಲಾಕ್‌ಡೌನ್‌‌ ವೇಳೆ ದಿನಸಿ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದರೂ ಕೂಡಾ ಜನರು ಇಂದೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು...
ದಕ್ಷಿಣ ಕನ್ನಡಸುದ್ದಿ

ದ.ಕ.: ‘ಲಾಕ್‌ಡೌನ್‌ ಮಾರ್ಗಸೂಚಿ ಬಿಡುಗಡೆ’ -ಜು.15ರ ರಾತ್ರಿಯಿಂದ ಜು. 23ರ ಬೆಳಿಗ್ಗೆವರೆಗೆ ಏನಿದೆ ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ನೀಡಲಾಗಿರುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು , ಸಹಾಯಕ ಆಯುಕ್ತರು, ತಹಶೀಲ್ದಾರ್...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
1 500 501 502 503 504 512
Page 502 of 512