Breaking News : ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ವೈ. ಸೂಚನೆ ; ಒಂದೇ ವರ್ಷದಲ್ಲಿ ಪೂರ್ಣಗೊಳ್ಳಲಿದೆಯಂತೆ ಯೋಜನೆ – ಕಹಳೆ ನ್ಯೂಸ್
ಬೆಂಗಳೂರು: ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು. ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂ ಎಲ್ ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ....