ಗುಡ್ಡ ಕಡಿದು ಕಟ್ಟಡ – ನಿರ್ಮಾಣ ಚಟುವಟಿಕೆಗಳಿಗಿಲ್ಲ ಅನುಮತಿ :-ದಕ್ಷಿಣ ಕನ್ನಡ ಡಿಸಿ ಸೂಚನೆ-ಕಹಳೆ ನ್ಯೂಸ್
ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ...