Saturday, April 12, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
ಕಾಸರಗೋಡುದಕ್ಷಿಣ ಕನ್ನಡಸುದ್ದಿ

ಅಡಿಕೆ ನಳ್ಳಿ ಬೀಳುವ ಸಮಸ್ಯೆ : ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಅಡಿಕೆ ತೋಟಗಳಿಗೆ ಭೇಟಿ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ ಒಣಗುವ ಸಮಸ್ಯೆ ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ ಗಮನಕ್ಕೆ ತಂದು, ಈ ಬಗ್ಗೆ ಸೂಕ್ತವಾದ ಅದ್ಯಯನ ಹಾಗೂ ಪರಿಹಾರ ಮಾರ್ಗ ಅಗತ್ಯವಾಗಿದೆ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಯಾವುದೇ ಲಾಕ್ ಡೌನ್ ಇಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ – ಕಹಳೆ‌ ನ್ಯೂಸ್

ಮಂಗಳೂರು, ಜು 07 : ದಕ್ಷಿಣ ಕನ್ನಡದಲ್ಲಿ ಮತ್ತೆ ಮಧ್ಯಾಹ್ನದ ಬಳಿಕ ಲಾಕ್‌ಡೌನ್ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.   ಸಾಮಾಜಿಕ ಜಾಲತಾಣದಲ್ಲಿ ಜುಲೈ 6ರ ಸೋಮವಾರ ಬೆಳಗ್ಗಿನಿಂದ ಇಂತಹ ಸಂದೇಶವೊಂದು ಹರಿದಾಡುತ್ತಿದೆ. ಇದರಿಂದಾಗಿ ಜಿಲ್ಲೆಯ ಜನತೆ ಗೊಂದಲಕ್ಕಿಡಾಗಿದ್ದರು. ಕಚೇರಿಗಳು, ಮಾಧ್ಯಮಗಳನ್ನು ಸಂಪರ್ಕಿಸಿ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಈ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಜು 7ರಿಂದ 11ರವರೆಗೆ ಭಾರಿ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಜು 07 : ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ. ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು,...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಇಂದು ಒಂದೇ ದಿನ ಎರಡು ಸಾವು ; ಉಳ್ಳಾಲದ‌ 50 ವರ್ಷದ ಮಹಿಳೆ ಹಾಗೂ ಮಂಗಳೂರಿನ 52 ವರ್ಷದ ಪುರುಷ ಕೊರೊನಾಗೆ ಬಲಿ – 10 ಮಂದಿ ಐಸಿಯೂನಲ್ಲಿ – ಕಹಳೆ ನ್ಯೂಸ್

ಮಂಗಳೂರು: ದ.ಕದಲ್ಲಿ ಕೊರೊನಾಗೆ ಮತ್ತೊಂದು‌ ಸಾವು‌ ಸಂಭವಿಸಿ ಸಾವಿನ‌ ಸಂಖ್ಯೆ‌ 24 ಕ್ಕೆ ಏರಿದೆ. ಉಳ್ಳಾಲದ 50 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇದಕ್ಕಿಂತ ಸ್ವಲ್ಪ ಮುಂಚೆ ಮಂಗಳೂರು ಹೊರಲಯದ ಸಂತೋಷ್ ನಗರ ನಿವಾಸಿ ಇಂದು ಸಾವನ್ನಪ್ಪಿದ್ದಾರೆ. 52 ವರ್ಷ ಪ್ರಾಯದ ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪುತ್ತೂರಿನ ಸೋಂಕಿತ ಪರಾರಿ – ಕಹಳೆ ನ್ಯೂಸ್

ಮಂಗಳೂರು : ಪುತ್ತೂರು ಮೂಲದ ವ್ಯಕ್ತಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದಿದ್ದವನನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಜುಲೈ ೫ರಂದು ಈತನಿಗೆ ಕೋವಿಡ್ 19 ಇರುವುದು ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದಕ್ಷಿಣ ಕನ್ನಡಸುದ್ದಿ

ಗುರುಪುರದಲ್ಲಿ ಗುಡ್ಡ ಕುಸಿದು ಮಕ್ಕಳು ಮೃತ್ಯು ; ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು, ಜು. 05 : ದ.ಕ. ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರ ಬಂಗ್ಲಗುಡ್ಡೆಯಲ್ಲಿ ರವಿವಾರದಂದು ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.   ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಲ್ಲದೆ, ಈ ಪ್ರದೇಶದಲ್ಲಿ ಸಿಲುಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಾಗಳಿಗೆ ಸ್ಥಳಾಂತರ ಮಾಡುವಂತೆಯೂ ಸೂಚನೆ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ವಿಷಮ ಆದಿತ್ಯವಾರ ; ಇಂದು ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಪಾಸಿಟಿವ್ – 38 ಮಂದಿ ಗುಣಮುಖ – ಕಹಳೆ ನ್ಯೂಸ್

ಮಂಗಳೂರು, ಜು. 05 : ದ.ಕ. ಜಿಲ್ಲೆಯಲ್ಲಿ ರವಿವಾರ ಒಂದೇ ದಿನ ಬರೋಬ್ಬರಿ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ...
1 565 566 567 568 569 573
Page 567 of 573
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ