ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ; ಎಲ್ಲೋ ಅಲರ್ಟ್ – ಕಹಳೆ ನ್ಯೂಸ್
ಮಂಗಳೂರು, ಮಾ.26 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದ್ದು, ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಜಿಲ್ಲೆಯ ಇತರ ಭಾಗಗಳಲ್ಲೂ ರಾತ್ರಿ ವೇಳೆ ವಾತಾವರಣ ಕಂಡುಬಂದಿದೆ. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ...