Recent Posts

Friday, November 22, 2024

ಕಾಸರಗೋಡು

ಕಾಸರಗೋಡುಸುದ್ದಿ

ಕಾಸರಗೋಡು ಅಲ್ಪ ಸಂಖ್ಯಾತ ಕನ್ನಡಿಗರ ವಿವಿಧ ಸಮಸ್ಯೆ ಮುಂದಿಟ್ಟು ಧರಣಿ ಸತ್ಯಾಗ್ರಹ ; ಕಾಸರಗೋಡಿನ ಕನ್ನಡಿಗರ ಧ್ವನಿ ಎಡನೀರು ಮಠದ ಸಚ್ಚಿದಾನಂದ ಭಾರತೀ ಶ್ರೀಪಾದರು ಭಾಗಿ – ಕಹಳೆ ನ್ಯೂಸ್

ಕಾಸರಗೋಡು, ಏ 29 : ಅಲ್ಪ ಸಂಖ್ಯಾತ ಕನ್ನಡಿಗರ ವಿವಿಧ ಸಮಸೈಗಳನ್ನು ಮುಂದಿಟ್ಟು ಕೊಂಡು ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಪರಿಸರದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸತ್ಯಾಗ್ರಹವನ್ನು ಉದ್ಘಾಟಿಸಿದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಉಪಸ್ಥಿತರಿದ್ದರು. ಇನ್ನು ಸಮಿತಿಯ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ರಯ ಅಧ್ಯಕ್ಷತೆ ವಹಿಸಿದ್ದು, ಕುಂಬಳೆ ಲಕ್ಷ್ಮಣ ಪ್ರಭು, ಕೆ.ಭಾಸ್ಕರ, ಗೋಪಾಲ ಶೆಟ್ಟಿ ಅರಿಬೈಲು,...
ಕಾಸರಗೋಡುಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್ ಎಡನೀರು ಮಠಕ್ಕೆ ಭೇಟಿ ; ಸಚ್ಚಿದಾನಂದ ಭಾರತೀ ಶ್ರೀಗಳೊಂದಿಗೆ ಸುಧೀರ್ಘ ಮಾತುಕತೆ – ಕಹಳೆ ನ್ಯೂಸ್

ಕಾಸರಗೋಡು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್ ಅವರು ಎಡನೀರು ಮಠಕ್ಕೆ ಭೇಟಿ ನೀಡಿ, ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಳಿ ಆಮಂತ್ರಿತ ಸದಸ್ಯ ಹಾಗೂ ಜ್ಞಾನ ಭಾರತೀ ಪ್ರಕಾಶನದ ಅಧ್ಯಕ್ಷರೂ ಆಗಿರುವ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಜೊತೆಗಿದ್ದರು....
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ಕರಾವಳಿ ಜಿಲ್ಲೆಯ ಶಾಲೆಯೊಂದರಿಂದ ಆತಂಕಕಾರಿ ಘಟನೆ ವರದಿ ; ಒಂದು ಶಾಲೆಯ 7 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಕಹಳೆ ನ್ಯೂಸ್

ಕಾಸರಗೋಡು : ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕರಾವಳಿ ಜಿಲ್ಲೆ ಕಾಸರಗೋಡಿನ ಬೇಕಲ ಎಂಬಲ್ಲಿ ನಡೆದಿದೆ. ಈ ಕುರಿತು ಡಿವೈಎಸ್‌ಪಿ ಸಿ.ಕೆ. ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ. ಮೂವರು ವಿದ್ಯಾರ್ಥಿಗಳು ನೀಡಿದ ದೂರಿನಂತೆ ನಾಲ್ವರ ವಿರುದ್ಧ ಬೇಕಲ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಕಾಸರಗೋಡುರಾಜಕೀಯರಾಜ್ಯಸುದ್ದಿ

ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ; ಸಿಡಿದೆದ್ದ ಕನ್ನಡ ಪ್ರಾಧಿಕಾರ – ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಕೇರಳ ಮುಖ್ಯಮಂತ್ರಿಯ ಈ ನಡೆ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡ ಭಾಷಿಕರಿಗೆ ತಮ್ಮ ಭಾಷೆಯಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವುದರಿಂದ ವಂಚಿಸುವ ಪ್ರಯತ್ನವಾಗಿದೆ. ಸಂವಿಧಾನದ 30/1ನೇ ವಿಧಿಯು ಭಾಷಾ ಅಲ್ಪಸಂಖ್ಯಾತರಿಗೆ...
ಕಾಸರಗೋಡುಕ್ರೈಮ್ಸುದ್ದಿ

ಶವವಾಗಿ ಬಾವಿಯಲ್ಲಿ ಪತ್ತೆಯಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ – ಕಹಳೆ ನ್ಯೂಸ್

ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿಯಾಗಿರುವ ಈಕೆ ಗುರುವಾರ 11.30ರ ಸುಮಾರಿಗೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆ ನಡೆದಾಗ ಶಾಂತವನ ಹೆತ್ತವರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ಬಾವಿಯಲ್ಲಿ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಳಿಸರು...
ಕಾಸರಗೋಡುಬದಿಯಡ್ಕಮಂಜೇಶ್ವರಸಂತಾಪಸುದ್ದಿ

265ರಷ್ಟು ಮನೆಗಳನ್ನು ನಿರ್ಮಿಸಿ ಕೊಡುಗಡೆ ನೀಡಿದ್ದ ಕಾಸರಗೋಡಿನ ಕೊಡುಗೈ ದಾನಿ, ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಕಾಸರಗೋಡು, ಜ 22 : ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್(85) ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಾಯಿರಾಂ ಗೋಪಾಲಕೃಷ್ಣ ಅವರು ಜಾತಿ, ಮತ, ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ 265ರಷ್ಟು ನಿರ್ಮಿಸಿ ನೀಡುವ  ಮೂಲಕ ಸೇವೆ ನೀಡಿದ್ದರು. ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆ ; ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ಆರ್ ಟಿಪಿಸಿಆರ್ ಕಡ್ಡಾಯ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ನ. 29 : ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೋಮವಾರದಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಸೋಮವಾರದಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು...
ಕಾಸರಗೋಡು

ದ.ಕ ಜಿಲ್ಲೆಗೆ ಮತ್ತೊಂದು ವೈರಸ್‍ನ ಆತಂಕ, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ…!-ಕಹಳೆ ನ್ಯೂಸ್

ಇಡೀ ದೇಶ ಕೊರೊನಾ ವೈರಸ್ ನಿಂದ ತತ್ತರಿಸಿ ಸಾಕಾಷ್ಟು ಸಾವು ನೋವುಗಳನ್ನು ಅನುಭವಿಸಿ, ಇತ್ತೀಚಿಗಷ್ಟೇ ಚೇತರಿಕೆ ಕಾಣುತಿದೆ. ಆದ್ರೆ ಈ ನಡುವೆ ಮತ್ತೊಂದು ವೈರಸ್ ಆತಂಕ ಸೃಷ್ಠಿಸುತ್ತಿದೆ, ಕೇರಳದಲ್ಲಿ ನೊರೊ ವೈರಸ್ ಕಾಣಿಸಿಕೊಂಡಿರುವುದೇ ಈ ಆತಂಕಕ್ಕೆ ಕಾರಣ. ಕೇರಳ ರಾಜ್ಯದ ವಯನಾಡು ಜಿಲ್ಲೆಯ ಪುಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ನೊರೊ ವೈರಾಣು ದೃಢಪಟ್ಟಿದೆ. ನೊರೊ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆ, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ...
1 8 9 10 11 12 17
Page 10 of 17