ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ – ಕಹಳೆ ನ್ಯೂಸ್
ತಿರುವನಂತಪುರಂ: ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ (Covid Subvariant) ಜೆಎನ್.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....