ಕಾಸರಗೋಡು ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಎಡನೀರು ಮಠಕ್ಕೆ ರಾಜ್ಯ ಸರಕಾರದ ಪ್ರತಿಷ್ಠಿತ ಗಡಿನಾಡ ಚೇತನ ಪ್ರಶಸ್ತಿ ; ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿ ಈ ಬಾರಿ ಕಾಸರಗೋಡು ಎಡನೀರು ಮಠಕ್ಕೆ ಲಭಿಸಿದೆ. ಶ್ರೀ ಎಡನೀರು ಮಠವು ಧಾರ್ಮಿಕ ಪೀಠವಾದರೂ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಪರ ಹೋರಾಟಗಳಲ್ಲಿ ನಿರತವಾಗಿರುವ ಸಾಂಸ್ಕೃತಿಕ ಪೀಠವಾಗಿದೆ. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಗುರುವಾರ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ 'ಗಡಿನಾಡ ಚೇತನ' ಪ್ರಶಸ್ತಿ ವಿತರಿಸಿ...